ಕಾರ್ಕಳ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಬೈಂದೂರು ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆ ಹೇರೆಂಜಾಲು ಕಂಬದಕೋಣೆ ಇವರ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ಯೋಗಾಸನ ಸ್ಪರ್ಧೆಯಲ್ಲಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ
ಶಾರ್ವಿ ಹೆಗಡೆ (7ನೇ ತರಗತಿ) – ಆರ್ಟಿಸ್ಟಿಕ್ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಟ್ರೇಡಿಶನಲ್ ಯೋಗಾಸನ ಸ್ಪರ್ಧೆಯಲ್ಲಿ ಮಾನ್ವಿ ಜಿ (9ನೇ ತರಗತಿ) ದ್ವಿತೀಯ ಸ್ಥಾನ ಪಡೆದಿದ್ದಾರೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶಾಲಾ ಅಧ್ಯಕ್ಷರು ಮತ್ತು ಸದಸ್ಯರು, ಮುಖ್ಯಶಿಕ್ಷಕರು ಮತ್ತು ಶಿಕ್ಷಕ ವೃಂದ ಅಭಿನಂದಿಸಿದರು.