
ಉಡುಪಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಜಿಲ್ಲೆಗೆ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು.
ಜಿಲ್ಲೆಯಲ್ಲಿ ಆರೋಗ್ಯ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರಕಾರಿ ಕಾಲೇಜಿನ ಅಗತ್ಯವಿದೆ ಎಂದು ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದಾರೆ ಇದಕ್ಕೆ ಸ್ಪಂದಿಸಿದ ಸಚಿವರು ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ನೀಡುವುದರ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.





