
ಉಡುಪಿ: ಜಿಲ್ಲೆಯಲ್ಲೂ ಇಂದು ಮುಂಜಾನೆಯಿಂದಲೇ ಭಾರಿ ಗಾಳಿ ಮಳೆಯಾಗುತ್ತಿದ್ದು ನಗರದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದು ಭಾರಿ ಗಾಳಿ ಮಳೆಯಿಂದಾಗಿ ಬೆಳಗಿನ ಸಮಯ ಜನರು ಕೆಲಸ ಕಾರ್ಯಗಳಿಗೆ ಹೋಗಲು ಪರದಾಡಬೇಕಾಯಿತು.









