
ಉಡುಪಿ: ದಿನದಿಂದ ದಿನಕ್ಕೆ ನಗರದಲ್ಲಿ ದರೋಡೆ ಪ್ರಕರಣಗಳು ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಎಸ್ಪಿ ನೇತೃತ್ವದಲ್ಲಿ ಜ್ಯವೆಲ್ಲರಿ ಹಾಗೂ ಬ್ಯಾಂಕ್ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಜ್ಯುವೆಲ್ಲರಿ ಹಾಗೂ ಬ್ಯಾಂಕುಗಳಲ್ಲಿ ಸುರಕ್ಷತೆಗೆ ಬೇಕಾದ ಅಗತ್ಯ ಕ್ರಮಗಳಾದ ಸಿಸಿಟಿವಿ ಅಳವಡಿಕೆ, ಭದ್ರತಾ ಸಿಬ್ಬಂದಿ ನೇಮಕ ಮುಂತಾದ ವಿಚಾರಗಳ ಕುರಿತು ಚರ್ಚಿಸಲಾಯಿತು.
ಈ ವೇಳೆ ಎಸ್ಪಿ ಅರುಣ್ ಭದ್ರತಾ ಸಿಬ್ಬಂದಿ ನೇಮಕದ ಸಂದರ್ಭದಲ್ಲಿ ನಿವೃತ್ತ ಸೈನಿಕರಿಗೆ ಆದ್ಯತೆ ನೀಡುವಂತೆ ಸಲಹೆ ನೀಡಿದರು.





















