
ಉಡುಪಿ: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ಕ್ಕೆ ಉಡುಪಿಗೆ ಭೇಟಿ ನೀಡುವ ಕಾರಣದಿಂದ ಜಿಲ್ಲೆಯ ಮೂರು ಠಾಣಾ ವ್ಯಾಪ್ತಿಯ ಶಾಲೆಗಳಿಗೆ ಆ ದಿನ ರಜೆ ಘೋಷಿಸಲಾಗಿದೆ.
ಉಡುಪಿ ನಗರ ಠಾಣೆ, ಮಲ್ಪೆ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಉಡುಪಿ ಡಿಸಿ ಸ್ವರೂಪ ಆದೇಶ ಹೊರಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಹಿನ್ನಲೆಯಲ್ಲಿ ಈಗಾಗಲೇ ಎಸ್‌ಪಿಜಿ ಭದ್ರತಾ ಪಡೆ ಉಡುಪಿಯಲ್ಲಿ ಬೀಡು ಬಿಟ್ಟಿದ್ದು ಭದ್ರತಾ ಕಾರಣಗಳಿಂದ ಹಲವು ಮಾರ್ಗಗಳನ್ನು ಬಂದ್ ಮಾಡಲಾಗುತ್ತದೆ. ಇದರಿಂದ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕಾಗುವ ಸಾಧ್ಯತೆಯಿದ್ದು ಸುರಕ್ಷತೆ, ಭದ್ರತೆ-ಶಿಷ್ಟಾಚಾರ ಪಾಲಿಸುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.



















