
ಉಡುಪಿ: ಶಾಸಕ ಯಶ್ ಪಾಲ್ ಸುವರ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶ್ರೀಕೃಷ್ಣ ಮಠಕ್ಕೆ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದು ಆಹ್ವಾನ ನೀಡಿದ್ದು ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಕಾಂಗ್ರೆಸ್ಗೆ ಶ್ರೀಕೃಷ್ಣನ ಕೃಪೆ ಯಾವತ್ತೂ ಇದೆ, ಉಡುಪಿ ಶಾಸಕರಿಗೆ ತಮ್ಮ ವರ್ತನೆ ತಿದ್ದಿಕೊಳ್ಳಲು ಶ್ರೀ ಕೃಷ್ಣ ಪರಮಾತ್ಮ ಆಶೀರ್ವಾದ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ.
ರಾಜ್ಯ ಬಿಜೆಪಿ ಈಗಾಗಲೇ ಮೂರು ತುಂಡು ಆಗಿದ್ದು ಅದನ್ನು ಸರಿಪಡಿಸುವುದನ್ನು ಬಿಟ್ಟು ತಮ್ಮ ರಾಜಕೀಯ ಬೇಳೆ ಬೇಯಿಸಲು ಹೀಗೆ ಮಾತನಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಕೋಮು ಸಂಘರ್ಷ ಕಡಿವಾಣ ಹಾಕಲು ವಿಶೇಷ ಕಾರ್ಯಪಡೆ ಸ್ಥಾಪಿಸಿರುವುದರಿಂದ ಕೋಮುವಾದಿ ಭಾಷಣಕ್ಕೆ ಕಡಿವಾಣ ಹಾಕಿದಂತಾಗಿದೆ. ಹೀಗಾಗಿ ಶಾಸಕರಿಗೆ ತಮ್ಮ ಬೇಳೆ ಬೇಯಿಸಲು ಬೇರೆ ವಿಷಯ ಸಿಗದಂತಾಗಿದೆ ಎಂದು ಪ್ರಸಾದ್ ರಾಜ್ ಕಾಂಚನ್ ಕಿಡಿ ಕಾರಿದ್ದಾರೆ.