
ಉಡುಪಿ: ಏಪ್ರಿಲ್ 15, 16 ಮತ್ತು 17ರಂದು ಇಂಜಿನಿಯರಿಂಗ್ ಸಹಿತ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶ ಸಂಬಂಧ ಸಾಮಾನ್ಯ ಪರೀಕ್ಷೆ ನಡೆಯಲಿದ್ದು ಜಿಲ್ಲೆಯಲ್ಲಿ ಒಟ್ಟು 8,089 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಉಡುಪಿ ಜಿಲ್ಲೆಯ 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಏಪ್ರಿಲ್ 15 ರಂದು ಆಯ್ದ ಕೇಂದ್ರಗಳಲ್ಲಿ ಮಾತ್ರ ಗಡಿನಾಡು-ಹೊರನಾಡು ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಏಪ್ರಿಲ್ 16 ಮತ್ತು 17ರಂದು ಮುಖ್ಯ ವಿಷಯಗಳ ಪರೀಕ್ಷೆಗಳು ನಡೆಯಲಿದೆ.
ವೆಬ್ ಕಾಸ್ಟಿಂಗ್ ಇರಲಿದ್ದು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪರೀಕ್ಷೆ ವೇಳೆ ವಿದ್ಯುತ್ ಸಂಪರ್ಕ ವ್ಯತ್ಯಯವಾಗದ ರೀತಿಯಲ್ಲಿ ಎಚ್ಚರ ವಹಿಸುವಂತೆ ಈಗಾಗಲೇ ಮೆಸ್ಕಾಂ ಅಧಿಕಾರಿಗಳಿಗೆ ಉಭಯ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.