29.3 C
Udupi
Friday, January 23, 2026
spot_img
spot_img
HomeBlogಉದ್ಯೋಗ ಆಕಾಂಕ್ಷಿಗಳಿಗೆ ಸರ್ಕಾರದ ದೊಡ್ಡ ಗಿಫ್ಟ್; ವಯೋಮಿತಿಗೆ 5 ವರ್ಷ ಸಡಿಲಿಕೆ

ಉದ್ಯೋಗ ಆಕಾಂಕ್ಷಿಗಳಿಗೆ ಸರ್ಕಾರದ ದೊಡ್ಡ ಗಿಫ್ಟ್; ವಯೋಮಿತಿಗೆ 5 ವರ್ಷ ಸಡಿಲಿಕೆ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಮಹತ್ವದ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಸಿವಿಲ್ ಸೇವೆಗಳ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷಗಳ ಕಾಲ ಸಡಿಲಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ತೀರ್ಮಾನದಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ 35ರಿಂದ 40ಕ್ಕೆ, ಪರಿಶಿಷ್ಟ ಜಾತಿ–ಪಂಗಡ ಅಭ್ಯರ್ಥಿಗಳಿಗೆ 38ರಿಂದ 43ಕ್ಕೆ ಹೆಚ್ಚಿಸಲಾಗಿದ್ದು, ಹಿಂದುಳಿದ ವರ್ಗಗಳಿಗೂ ನಿಯಮಾನುಸಾರ 5 ವರ್ಷಗಳ ವಿನಾಯಿತಿ ಅನ್ವಯವಾಗಲಿದೆ.

ಈ ಸಡಿಲಿಕೆ 31 ಡಿಸೆಂಬರ್ 2027ರವರೆಗೆ ಹೊರಡಿಸಲ್ಪಡುವ ಎಲ್ಲಾ ಸರ್ಕಾರಿ ನೇಮಕಾತಿ ಅಧಿಸೂಚನೆಗಳಿಗೆ ಅನ್ವಯವಾಗಲಿದ್ದು, ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಂದ ನೇಮಕಾತಿ ವಿಳಂಬವಾಗಿ ವಯೋಮಿತಿ ಮೀರಿದ್ದ ಲಕ್ಷಾಂತರ ಅಭ್ಯರ್ಥಿಗಳಿಗೆ ಇದು ದೊಡ್ಡ ಪರಿಹಾರವಾಗಲಿದೆ ಎಂದು ಸರ್ಕಾರ ತಿಳಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page