29.3 C
Udupi
Monday, April 6, 2026
spot_img
spot_img
HomeBlog"ಉಪಚುನಾವಣೆ ಫಲಿತಾಂಶಕ್ಕೂ ಸಿಎಂ ಬದಲಾವಣೆಗೆ ಸಂಬಂಧವಿಲ್ಲ" : ಗೃಹ ಸಚಿವ ಜಿ ಪರಮೇಶ್ವರ್

“ಉಪಚುನಾವಣೆ ಫಲಿತಾಂಶಕ್ಕೂ ಸಿಎಂ ಬದಲಾವಣೆಗೆ ಸಂಬಂಧವಿಲ್ಲ” : ಗೃಹ ಸಚಿವ ಜಿ ಪರಮೇಶ್ವರ್

spot_imgspot_img

ಮೈಸೂರು : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ ಉಪಚುನಾವಣೆಯ ಫಲಿತಾಂಶವು ರಾಜ್ಯದ ಕಾಂಗ್ರೆಸ್ ನಾಯಕತ್ವದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಸಿಎಂ ಬದಲಾವಣೆಗೂ ಈ ಫಲಿತಾಂಶಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ಅವರು ಪೂರ್ಣ 5 ವರ್ಷಗಳ ಕಾಲ ಸಿಎಂ ಆಗಿ ಮುಂದುವರೆಯಲಿದ್ದಾರೆ. ಉಪಚುನಾವಣೆಯ ಫಲಿತಾಂಶವನ್ನು ಯಾವುದೇ ಮಾನದಂಡವಾಗಿ ಪರಿಗಣಿಸುವ ಅಗತ್ಯವಿಲ್ಲ. ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ವ್ಯಾಪ್ತಿಯದ್ದು ಎಂದು ಹೇಳಿದ ಅವರು, ರಾಜ್ಯದಲ್ಲಿ ಸದ್ಯಕ್ಕೆ ಅಂತಹ ಯಾವುದೇ ಚರ್ಚೆ ಇಲ್ಲ ಎಂದರು.

ಡಿ.ಕೆ.ಶಿವಕುಮಾರ್ ಪಕ್ಷದ ನಾಯಕರು ಹಾಗೂ ಉಪಮುಖ್ಯಮಂತ್ರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯದಲ್ಲಿ ಪಕ್ಷದೊಳಗೆ ಯಾವುದೇ ಗೊಂದಲಗಳಿಲ್ಲ. ಕೆಲವರ ಹೇಳಿಕೆಗಳಿಂದ ಏನೂ ಬದಲಾವಣೆ ಆಗುವುದಿಲ್ಲ, ಎಲ್ಲ ವಿಚಾರಗಳನ್ನೂ ಹೈಕಮಾಂಡ್‌ಗೆ ಬಿಟ್ಟಿದ್ದೇವೆ ಎಂದು ತಿಳಿಸಿದರು.

ತಾವು ಸಿಎಂ ಆಗುವ ಪ್ರಶ್ನೆಗೆ ಉತ್ತರಿಸಿದ ಅವರು, ಆ ಸ್ಥಾನ ಖಾಲಿ ಇಲ್ಲದ ಕಾರಣ ಆ ವಿಷಯ ಪ್ರಸ್ತುತವಲ್ಲ ಎಂದು ಹೇಳಿ, ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಪುನರುಚ್ಚರಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page