
ಉಪ್ಪಿನಂಗಡಿ: ಜುಲೈ 18 ಗುರುವಾರ ಬೆಳಿಗ್ಗೆ ಐರಾವತ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಾಣಪಾಯಗಳು ವರದಿಯಾಗಿಲ್ಲ.
ಬೆಂಗಳೂರಿನಿಂದ ಮಂಗಳೂರಿಗೆ ಐರಾವತ ಬಸ್ ಆಗಮಿಸುವ ಸಂದರ್ಭ, ಬಸ್ಸಿನ ಹಿಂಬದಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಬಸ್ಸನ್ನು ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ. ಸ್ಥಳೀಯರಾದ ಜಾಯಿ, ಸ್ನೇಕ್ ಝಕರಿಯಾ, ಸಿದ್ದೀಕ್ ಕೊಪ್ಪಳ ಸೇರಿದಂತೆ ಅಟೋ ಚಾಲಕರು ರಸ್ತೆಯಲ್ಲಿದ್ದ ಕೆಸರು, ಮಣ್ಣು, ನೀರನ್ನು ಬಸ್ಸಿಗೆ ಎರಚಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ








