
ಕಾಂತಾರ ಚಾಪ್ಟರ್-1 ಸಿನಿಮಾವು ಭಾರಿ ಯಶಸ್ವಿಯೊಂದಿಗೆ ಸಾಗುತ್ತಿದ್ದು ಸಾಹಸ ಸನ್ನಿವೇಶಗಳ ಝಲಕ್, ಕಾಂತಾರದ ವಾವ್ ಎನ್ನಿಸುವ ಕ್ಲೈಮ್ಯಾಕ್ಸ್ ಇವೆಲ್ಲವು ಹುಬ್ಬೇರಿಸುವಂತೆ ಮಾಡಿದೆ.
ಆದರೆ ಈ ದೃಶ್ಯಗಳನ್ನ ಸೆರೆ ಹಿಡಿಯುವ ವೇಳೆ ತೆರೆಹಿಂದೆ ಕಲಾವಿದರು, ತಂತ್ರಜ್ಞರು ಪಡುವ ಕಷ್ಟ ಹೇಗಿರುತ್ತೆ ಅನ್ನೋದು ಮಾತ್ರ ಯಾರಿಗೂ ಗೊತ್ತಿರುವುದಿಲ್ಲ. ಇವತ್ತು ಕಾಂತಾರ ಸಿನಿಮಾ ಭಾರಿ ಮೆಚ್ಚುಗೆ ಪಡೆಯುತ್ತಿರುವುದಕ್ಕೆ ತೆರೆ ಮರೆಯಲ್ಲಿ ಆದ ಆ ದಿನದ ಹೋರಾಟ ಹೇಗಿತ್ತು ಎಂದು ರಿಷಬ್ ಶೆಟ್ಟಿ ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಫೋಟೋ ಸಮೇತ ಹಂಚಿಕೊಂಡಿದ್ದಾರೆ.
ಶೂಟಿಂಗ್ ವೇಳೆ ತೆರೆಹಿಂದಿನ ರಿಷಬ್ ಹೋರಾಟ ಹೇಗಿತ್ತು ಅನ್ನೋದನ್ನ ಈ ಫೋಟೋಗಳು ಅನಾವರಣಗೊಳಿಸಿವೆ. ಕ್ಲೈಮ್ಯಾಕ್ಸ್ ಶೂಟಿಂಗ್ ಸಮಯದಲ್ಲಿ ಊದಿಕೊಂಡಿದ್ದ ಕಾಲು, ನಿತ್ರಾಣವಾಗಿದ್ದ ದೇಹ, ಸುಸ್ತಾಗಿ ಮಲಗಿದ್ದ ರಿಷಬ್ ಶೆಟ್ಟಿ. ಇವತ್ತು ಕೋಟ್ಯಂತರ ಜನ ನೋಡಿ ಮೆಚ್ಚುವ ಹಾಗೆ ಆಗಿದೆ ಅಂದ್ರೆ ಅದಕ್ಕೆ ತೆರೆಹಿಂದೆ ನಾವು ಪಟ್ಟ ಶ್ರಮದ ಜೊತೆಗೆ ನಾವು ನಂಬಿರುವ ಶಕ್ತಿಗಳ ಆಶೀರ್ವಾದದಿಂದ ಮಾತ್ರ ಸಾಧ್ಯ ಎಂದು ಜಾಲತಾಣದಲ್ಲಿ ಡಿವೈನ್ಸ್ಟಾರ್ ರಿಷಬ್ ಶೆಟ್ಟಿ ಬರೆದುಕೊಂಡಿದ್ದಾರೆ.
ನಟ, ನಿರ್ದೇಶಕ ರಿಷಬ್ ಶೆಟ್ಟಿ ಕ್ಲೈಮ್ಯಾಕ್ಸ್ ಟೈಮಲ್ಲಿ ತಮ್ಮ ಕಾಲಿಗೆ ಆದ ನೋವುಗಳನ್ನ ಕೆಲ ಫೋಟೋಗಳ ಸಮೇತ ಹಂಚಿಕೊಂಡಿದ್ದಾರೆ . ಈ ಮೂಲಕ ಸಿನಿಮಾ ನೋಡಿ ಅಭಿಪ್ರಾಯ ವ್ಯಕ್ತಪಡಿಸಿದ ತಮ್ಮೆಲ್ಲರಿಗೂ ಧನ್ಯವಾದಗಳು ಎಂದು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.






















































