ಬೆಳಗಾವಿ: ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಪಿಎಲ್ ಪಡಿತರ ಚೀಟಿ ಹೊಂದಿರುವ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರೂಪಾಯಿ ಹಣ ಪಡೆಯಲಿದ್ದಾರೆ. ಆದರೆ ಆದಾಯ ತೆರಿಗೆ ಪಾವತಿ ಮಾಡುತ್ತಿರುವವರಿಗೆ ಗೃಹಲಕ್ಷ್ಮೀ ಹಣ ಸಿಗೋದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಹಿಳೆಯರು ತಮ್ಮ ಕಾರ್ಡ್‌ಗಳನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ಪರಿವರ್ತಿಸಿದರೂ ಗೃಹಲಕ್ಷ್ಮಿ ಕಂತುಗಳನ್ನು ಪಡೆಯುವುದು ಮುಂದುವರಿಯುತ್ತದೆ. ಪರಿಶೀಲನಾ ಪ್ರಕ್ರಿಯೆಯ ಬಳಿಕ ಬಿಪಿಎಲ್‌ನಿಂದ ಎಪಿಎಲ್ ಕಾರ್ಡ್‌ಗೆ ಶಿಫ್ಟ್ ಆದ ಕುಟುಂಬದ ಮನೆಯ ಯಜಮಾನಿ ಕೂಡ 2 ಸಾವಿರ ರೂಪಾಯಿ ಮಾಸಿಕ ಕಂತು ಪಡೆಯಲು ಅರ್ಹರಾಗಿರುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.