ಬೆಂಗಳೂರು: ಇತ್ತೀಚಿಗೆ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ಪರಿಷ್ಕರಿಸಿ ಅನರ್ಹರ ಕಾರ್ಡ್ಗಳನ್ನು ರದ್ದುಪಡಿಸಿದ ಬೆನ್ನಲ್ಲೇ ಈಗ ಕಾರ್ಮಿಕರ ಕಾರ್ಡ್‌ಗಳನ್ನು ಅಮಾನತು ಮಾಡಲು ಮುಂದಾಗಿದ್ದು ಈಗಾಗಲೇ 2.46 ಲಕ್ಷ ಕಾರ್ಮಿಕರ ಕಾರ್ಡ್‌ಗಳನ್ನು ರದ್ದುಗೊಳಿಸಿದೆ.
ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಬರೋಬ್ಬರಿ 38.42 ಲಕ್ಷ ಕಾರ್ಮಿಕರು ನೋಂದಣಿ ಮಾಡಿದ್ದು ಈ ಪೈಕಿ 2,46,951 ಕಾರ್ಡನ್ನು ನಕಲಿ ಎಂದು ಲಿಸ್ಟ್ ಮಾಡಿದ ಕಾರ್ಮಿಕ ಇಲಾಖೆ ಅಮಾನತು ಮಾಡಲು ಆದೇಶ ಹೊರಡಿಸಿದೆ.
ಹಾವೇರಿ ಜಿಲ್ಲೆಯೊಂದರಲ್ಲೇ ಅತಿ ಹೆಚ್ಚು 1,69,180 ಕಾರ್ಡ್‌ಗಳನ್ನು ಅಮಾನತು ಮಾಡಿದ್ದು ನಕಲಿ ಕಾರ್ಮಿಕರ ಕಾರ್ಡ್‌ಗಳನ್ನು ಅಮಾನತು ಮಾಡಿದ್ದರಿಂದ ಸರ್ಕಾರಕ್ಕೆ ಕೋಟ್ಯಂತರ ರೂ. ಉಳಿತಾಯವಾಗಲಿದೆ.
ಕಾರ್ಮಿಕ ಕಾರ್ಡ್ ಪಡೆಯಲು ಇರುವ ಮಾನದಂಡಗಳು:
– ನಿರ್ಮಾಣಕ್ಕೆ ಸಂಬಂಧಿಸಿದ ವೃತ್ತಿಯಲ್ಲಿರಬೇಕು
– ಪ್ಲಂಬರ್,ಪೇಂಟಿಂಗ್, ರಸ್ತೆ ನಿರ್ಮಾಣ, ಇಟ್ಟಿಗೆ ನಿರ್ಮಾಣ ಸೇರಿ 56 ವೃತ್ತಿ ಮಾಡುವವರು ಈ ಕಾರ್ಡ್ ಪಡೆಯಲು ಅರ್ಹರು
– ನಿರ್ಮಾಣಕ್ಕೆ ಸಂಬಂಧಪಟ್ಟಂತೆ 90 ದಿನ ಕೆಲಸ ಮಾಡಿದ್ದರೆ ಅಂತವರು ಕಾರ್ಮಿಕರ ಕಾರ್ಡ್ ಪಡೆಯಲು ಅರ್ಹರು.