
ಬೆಂಗಳೂರು: ಆಮ್ ಆದ್ಮಿ ಯುವ ಘಟಕದ ಅಧ್ಯಕ್ಷ ಜಿ.ಹೆಚ್.ಲೋಹಿತ್ ಕುಮಾರ್ ಎಸಿಪಿ ಚಂದನ್‌ಗೆ ಟ್ವಿಟರ್ ಮೂಲಕ ಬೆದರಿಕೆ ಹಾಕಿರುವ ಆರೋಪದ ಮೇಲೆ ಮೈಸೂರು ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಠಾಣೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಬೆತ್ತಲೆ ಮಾಡಿದ್ದಾರೆ ಎಂಬ ಮಾಹಿತಿ ಮೇಲೆ ಎಸಿಪಿ ಚಂದನ್ ಅವರಿಗೆ ಪೊಲೀಸ್ ಠಾಣೆಗೆ ನಾನು ಬರ್ತಿದ್ದೇನೆ , ನೀನು ಇರು ಎಂದು ಟ್ವಿಟರ್ ಮೂಲಕ ಪ್ರತಾಪ್ ಸಿಂಹ ಬೆದರಿಕೆ ಹಾಕಿರುತ್ತಾರೆ. ಹೀಗಾಗಿ ಮಾಜಿ ಸಂಸದರ ಟ್ವೀಟ್ ರಾಜ್ಯದ ಕಾನೂನು ಹಾಗೂ ಪೊಲೀಸ್ ಇಲಾಖೆ ಮೇಲಿಟ್ಟಿರುವ ನಂಬಿಕೆ ಕಳೆದುಕೊಳ್ಳುವಂತಾಗಿದೆ. ಯಾವುದೇ ದಾಖಲೆ ಇಲ್ಲದಿದ್ದರೂ ರಾಜಕೀಯ ಉದ್ದೇಶದಿಂದ ಟ್ವೀಟ್ ಮಾಡಿದ್ದು ಕೂಡಲೇ ಇವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಲೋಹಿತ್ ಕುಮಾರ್ ಒತ್ತಾಯಿಸಿದ್ದಾರೆ











