2023-24 ನೇ, ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

ಕಾರ್ಕಳ: ಜುಲೈ.7 ಬುಧವಾರ ದಂದು ,ಶ್ರಿ ಬಾಹುಬಲಿ ಪ್ರವಚನ ಮಂದಿರದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದಿಸುವ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್. ಎನ್. ವಿ ಶಿಕ್ಷಣ ಸಂಸ್ಥೆಗಳ ಸಂಚಾಲಕರು ಹಾಗೂ ಕಾರ್ಕಳದ ಹಿರಿಯ ನ್ಯಾಯವಾದಿಗಳಾದ ಶ್ರೀ ಎಂ. ಕೆ. ವಿಜಯ ಕುಮಾರ್ ಇವರು ವಿದ್ಯಾರ್ಥಿಗಳ ಸಾಧನೆಯನ್ನು ಮೆಚ್ಚಿ ಶುಭವನ್ನು ಹಾರೈಸಿದರು. ಕಾರ್ಯಕ್ರಮದಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಯರಾದ ಮಾನ್ಯಶ್ರೀ ಹಾಗೂ ಸಿಂಚನ, ದ್ವಿತೀಯ ಸ್ಥಾನವನ್ನು ಪಡೆದ ನಮಿತಾ ಜೈನ್ ಬಿ. ಎ. ಹಾಗೂ ಶ್ರೇಯಾ ಪೂಜಾರಿ, ತೃತೀಯ ಸ್ಥಾನವನ್ನು ಪಡೆದ ಪ್ರಾಪ್ತಿ ಡಿ.ವಿ ಇವರುಗಳನ್ನು ಸನ್ಮಾನಿಸಲಾಯಿತು. ತದನಂತರದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಿತು.

ವೇದಿಕೆಯಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಗುಣಪಾಲ ಕಡಂಬ ಹಾಗೂ ಎಸ್. ಎನ್. ವಿ ಪ್ರೌಢಶಾಲೆ ಹಾಗೂ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿಯರುಗಳಾದ ಶ್ರೀಮತಿ ಉಷಾ ಪಡಿವಾಳ್ ಹಾಗೂ ಶ್ರೀಮತಿ ಶರ್ಮಿಳಾ ಹೆಗ್ಡೆ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರು ಸ್ವಾಗತಿಸಿದರು, ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಶ್ರೀಮತಿ ಸುಪ್ರೀತಾ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಸಹನ ಎನ್ ಸಾಧಕರ ಪರಿಚಯ ವಾಚಿಸಿದರು.
ಆಂಗ್ಲ ಭಾಷಾ ಉಪನ್ಯಾಸಕರಾದ ಶ್ರಿ ಅನಿಲ್ ಕುಮಾರ್ ವಂದಿಸಿದರು.



















































