ಫೆ. 28 ರಿಂದ ದ್ವಿತೀಯ ಪಿಯುಸಿ, ಮಾ 18 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ

ಕರ್ನಾಟಕ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮತ್ತೊಮ್ಮೆ ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ತರಗತಿ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ.
ಇದೇ ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು,1,217 ದ್ವಿತೀಯ ಪಿಯು ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಏಪ್ರಿಲ್ ಏಳರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ
ಫೆಬ್ರವರಿ 28- ಕನ್ನಡ, ಅರೇಬಿಕ್
ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3- ಇಂಗ್ಲಿಷ್
ಮಾರ್ಚ್ 4- ತಮಿಳು,ತೆಲುಗು,ಮಲಯಾಳಂ, ಮರಾಠಿ,ಉರ್ದು,ಸಂಸ್ಕೃತ ಫ್ರೆಂಚ್.
ಮಾರ್ಚ್ 5- ಇತಿಹಾಸ
ಮಾರ್ಚ್ 6- ಭೌತಶಾಸ್ತ್ರ
ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,ಭೂಗರ್ಭ ಶಾಸ್ತ್ರ.
ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10- ಅರ್ಥಶಾಸ್ತ್ರ
ಮಾರ್ಚ್ 11- ತರ್ಕಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 12- ಹಿಂದಿ
ಮಾರ್ಚ್ 13- ರಾಜ್ಯಶಾಸ್ತ್ರ
ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16- ಸಮಾಜಶಾಸ್ತ್ರ,ಜೀವಶಾಸ್ತ್ರ,ಗಣಕ ವಿಜ್ಞಾನ.
ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ
ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ: ಮೇ 18ರಿಂದ ಆರಂಭವಾಗಲಿರುವ ಎಸ್ಎಲ್ಎಲ್ಸಿ ಪರೀಕ್ಷೆ-2; ಮೇ 18ರಂದು ಪ್ರಥಮ ಭಾಷೆ, ಮೇ 19ರಂದು ವಿಜ್ಞಾನ, ಮೇ 20ರಂದು ದ್ವೀತಿಯ ಭಾಷೆ, ಮೇ 21ರಂದು ಗಣಿತ, ಮೇ 22ರಂದು ತೃತೀಯ ಭಾಷೆ, ಮೇ 23ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.




