
ಶಿಕ್ಷಣ ಇಲಾಖೆ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ನಡೆದ ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟದಲ್ಲಿ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ರಕ್ಷಾ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ.
ಆಯ್ಕೆಯಾದ ವಿದ್ಯಾರ್ಥಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಪ್ರಭಾವತಿ , ತರಬೇತುದಾರ ಅಕ್ಷತ್ ತರಬೇತಿಯನ್ನು ನೀಡಿರುತ್ತಾರೆ,ಇವರು ರೆಂಜಾಳ ಗೋಳಿದಡಿ ಉಷಾ,ರವಿಯವರ ಸುಪುತ್ರಿ.
ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರಾದ ನೇಮಿರಾಜ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಯೋಗೇಂದ್ರ ನಾಯಕ್, ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.













