29 C
Udupi
Thursday, April 16, 2026
spot_img
spot_img
HomeBlogಏಪ್ರಿಲ್‌ನಲ್ಲೇ ಉರಿಯುತ್ತಿರುವ ರಾಜ್ಯ: ಬಿಸಿಗಾಳಿ ತೀವ್ರತೆ ಹೆಚ್ಚಳ

ಏಪ್ರಿಲ್‌ನಲ್ಲೇ ಉರಿಯುತ್ತಿರುವ ರಾಜ್ಯ: ಬಿಸಿಗಾಳಿ ತೀವ್ರತೆ ಹೆಚ್ಚಳ

ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲಿನ ತೀವ್ರತೆ ದಿನೇದಿನೇ ಹೆಚ್ಚುತ್ತಿದ್ದು, ಜನಜೀವನಕ್ಕೆ ಸಂಕಷ್ಟ ಉಂಟಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ 44°–45°C ತಾಪಮಾನ ದಾಖಲಾಗಿದ್ದು, ರಾಜ್ಯದ ಅತ್ಯಂತ ಬಿಸಿ ಪ್ರದೇಶವಾಗಿ ಹೊರಹೊಮ್ಮಿದೆ.

ಇತ್ತ ಬೆಂಗಳೂರಿನಲ್ಲಿ ಬುಧವಾರ 35.8°C ತಾಪಮಾನ ದಾಖಲಾಗಿದ್ದು, ನಗರದಲ್ಲೂ ಬಿಸಿಯ ತಾಪ ಹೆಚ್ಚಾಗಿದೆ.
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ 36°C ರಿಂದ 37°C ವರೆಗೆ ತಾಪಮಾನ ಇರಲಿದ್ದು, ಒಣಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇತ್ತೀಚೆಗೆ ದಾಖಲಾಗಿರುವ ತಾಪಮಾನಗಳು ಈ ವರ್ಷದ ಗರಿಷ್ಠ ಮಟ್ಟದಲ್ಲಿದ್ದು, 38°C ತಲುಪುವ ಸಾಧ್ಯತೆ ಇದೆ. ಕೆಲವೆಡೆ ಸಿಡಿಲು ಸಹಿತ ಮಳೆಯ ನಿರೀಕ್ಷೆಯಿದ್ದರೂ, ಅದು ಸೀಮಿತ ಪ್ರದೇಶಗಳಿಗೆ ಮಾತ್ರ ಸೀಮಿತವಾಗಲಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೀಟ್‌ವೇವ್ ಪರಿಸ್ಥಿತಿ ಗಂಭೀರವಾಗಿದ್ದು, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ತಾಪಮಾನ 45°C ಸಮೀಪ ತಲುಪಿದ್ದು, ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಜನರಿಗೆ ಮಧ್ಯಾಹ್ನ 11:30ರಿಂದ ಸಂಜೆ 5ರವರೆಗೆ ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸಲು ಸೂಚಿಸಿದ್ದಾರೆ. ಜೊತೆಗೆ, ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಬಿಸಿ ಮತ್ತು ತೇವಾಂಶಯುಕ್ತ ಹವಾಮಾನದ ಹಿನ್ನೆಲೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page