21.7 C
Udupi
Tuesday, February 17, 2026
spot_img
spot_img
HomeBlogಏಪ್ರಿಲ್ 24ರಿಂದ ಮೇ 8ರವರೆಗೆ ದ್ವಿತೀಯ ಪಿಯುಸಿ-2 ಪರೀಕ್ಷೆ : ನಿಷೇಧಾಜ್ಞೆ ಜಾರಿ

ಏಪ್ರಿಲ್ 24ರಿಂದ ಮೇ 8ರವರೆಗೆ ದ್ವಿತೀಯ ಪಿಯುಸಿ-2 ಪರೀಕ್ಷೆ : ನಿಷೇಧಾಜ್ಞೆ ಜಾರಿ

spot_imgspot_img

ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆದು ಫಲಿತಾಂಶ ಈಗಾಗಲೇ ಬಿಡುಗಡೆಗೊಂಡಿದ್ದು ಇದೀಗ ಏಪ್ರಿಲ್ 24 ರಿಂದ ಮೇ 8 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ.

ಜಿಲ್ಲೆಯಲ್ಲಿ ಒಟ್ಟು ಆರು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲ್ಲಿದ್ದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪರೀಕ್ಷೆಗಳು ಯಾವುದೇ ಅಡ್ಡಿ ಇಲ್ಲದೆ ದೋಷರಹಿತವಾಗಿ ನಡೆಸಲು ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಪರೀಕ್ಷೆ ನಡೆಯುತ್ತಿರುವ ವೇಳೆ ವಿದ್ಯಾರ್ಥಿಗಳು ಮೊಬೈಲ್, ಸೆಲ್ಯುಲರ್ ಫೋನ್, ಟ್ಯಾಬ್ಲೆಟ್, ಪೆನ್ ಡ್ರೈವ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಮತ್ತು ಇತರ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ಅದೇ ರೀತಿ ಲಾಗ್ ಟೇಬಲ್, ಕೈಚೀಲ, ಪರ್ಸು, ನೋಟುಗಳು, ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳು ಸೇರಿದಂತೆ ಯಾವುದೇ ರೀತಿಯ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವುದನ್ನು ನಿಷೇಧಿಸಲಾಗಿದೆ.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page