26.2 C
Udupi
Friday, April 24, 2026
spot_img
spot_img
HomeBlogಓಣಂ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 13ರಂದು ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯ ತೆರವು

ಓಣಂ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 13ರಂದು ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯ ತೆರವು

ಓಣಂ ಹಬ್ಬದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಾಲಯ ಸೆಪ್ಟೆಂಬರ್ 13ರಂದು ತೆರೆಯಲಿದೆ ಎಂಬ ಮಾಹಿತಿ ಲಭ್ಯವಾಗಿದ್ದು ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲನ್ನು ತೆರೆಯಲಾಗುತ್ತದೆ ಎಂದು ವರದಿಯಾಗಿದೆ.ಸೆಪ್ಟೆಂಬರ್ 17 ರಿಂದ ಐದು ದಿನಗಳ ಮಾಸಿಕ ಪೂಜೆ ನಡೆಯಲಿದ್ದು ಸೆಪ್ಟೆಂಬರ್ 21 ರಂದು ರಾತ್ರಿ 10 ಗಂಟೆಗೆ ಅಥಾಜ ಪೂಜೆ ಮತ್ತು ಹರಿವರಾಸನದ ನಂತರ ದೇವಾಲಯವನ್ನು ಮುಚ್ಚಲಾಗುತ್ತದೆ.

ಉದಯಾಸ್ತಮಾನ ಪೂಜೆ ಮತ್ತು ಅಷ್ಟಾಭಿಷೇಕಗಳು ದೇವಾಲಯದಲ್ಲಿ ನಡೆಯಲಿರುವ ಇತರ ಧಾರ್ಮಿಕ ವಿಧಿಗಳಾಗಿದ್ದು ಸಮಾರಂಭದ ನಂತರ ಅನ್ನದಾನ ಸಭಾಂಗಣದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. ಹಬ್ಬದ ದಿನಗಳಲ್ಲಿ ಕಲಭಾಭಿಷೇಕ, ಪಡಿಪೂಜೆ, ಪುಷ್ಪಾಭಿಷೇಕ ಸೇರಿದಂತೆ ವಿಶೇಷ ಆಚರಣೆಗಳು ನಡೆಯಲಿವೆ.ದೇವರ ಹೆಸರಿನಲ್ಲಿ ದೀಪದ ಮುಂದೆ ಇಟ್ಟಿರುವ ಬಾಳೆ ಎಲೆಯ ಮೇಲೆ ಸಿಹಿತಿಂಡಿಗಳು ಸೇರಿದಂತೆ ಹಬ್ಬದ ಭಕ್ಷ್ಯಗಳನ್ನು ಇಟ್ಟು ಆಚರಣೆ ಮಾಡಲಾಗುತ್ತದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page