ಟೋಲ್ ಕೇಂದ್ರ ರದ್ದುಪಡಿಸುವುದಾಗಿ ಭರವಸೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ

ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಟೋಲ್ ಸಂಗ್ರಹ ಕೇಂದ್ರವನ್ನು ರದ್ದುಪಡಿಸುವ ನಿಟ್ಟಿನಲ್ಲಿ ಮಾಜಿ ಸಚಿವರು,ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆಯವರ ನೇತೃತ್ವದಲ್ಲಿ ಲೋಕೋಪಯೊಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ
ಉಡುಪಿ ಜಿಲ್ಲಾ ನಿಯೋಗದೊಂದಿಗೆ ಮನವಿ ಸಲ್ಲಿಸಲಾಯಿತು.
ಈ ಮನವಿಯನ್ನು ಸ್ವೀಕರಿಸಿದ ಸಚಿವರು ಟೋಲ್ ಕೇಂದ್ರ ರದ್ದುಪಡಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ, ಕಾರ್ಕಳ ಕಾಂಗ್ರೆಸ್ ಮುಖಂಡರಾದ ಮುನಿಯಾಲ್ ಉದಯ್ ಶೆಟ್ಟಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ದಿನೇಶ್ ಕೊಡವೂರು ಮತ್ತು ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.













