
ಮುಂಬೈ: ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಶಿಕ್ಷಕ ತಂದೆಯೊಬ್ಬ ತನ್ನ ಮಗಳು ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕಗಳಿಸಿದ್ದಾಳೆ ಎಂಬ ಕ್ಷುಲ್ಲಕ ಕಾರಣಕ್ಕೆ ಬಡಿಗೆಯಿಂದ ತೀವ್ರವಾಗಿ ಥಳಿಸಿದ್ದು ಗಂಭೀರವಾಗಿ ಗಾಯಗೊಂಡ ಆಕೆಯನ್ನು ಆಸ್ಪತ್ರೆಯಲ್ಲಿ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ವೃತ್ತಿಯನ್ನು ಶಿಕ್ಷಕನಾಗಿರುವ ಆರೋಪಿ ದೋಂಡಿರಾಮ್ ಭೋಂಸ್ಲೆ ಮಗಳು ಕಡಿಮೆ ಅಂಕ ಪಡೆದ ಕಾರಣ ಅಸಮಧಾನಗೊಂಡಿದ್ದು ಇದೇ ಕಾರಣಕ್ಕೆ ವಾಗ್ವಾದ ನಡೆಸಿದ್ದ ಆತ ಪತ್ನಿ ಹಾಗೂ ಪುತ್ರನೆದುರು ಮಗಳಿಗೆ ಥಳಿಸಿದ್ದ. ಗಂಭೀರವಾಗಿ ಗಾಯಗೊಂಡ ಸಾಧನಾಳನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಬಾಲಕಿಯ ತಾಯಿಯು ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ನೀಡಿದ್ದು ಈ ದೂರಿನ ಮೇರೆಗೆ ಪೊಲೀಸರು ಆರೋಪಿ ದೋಂಡಿರಾಮ್ ನನ್ನು ಬಂಧಿಸಿದ್ದಾರೆ.






















































