
ಬೆಂಗಳೂರು: ರಾಜ್ಯದ ವಿವಿಧ ಕನ್ನಡ ಪರ ಸಂಘಟನೆಗಳು ರೈಲ್ವೆ ಇಲಾಖೆಯ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಬೇಕೆಂದು ಹೋರಾಟ ನಡೆಸಿದ್ದು ಇದರ ಪರಿಣಾಮ ರೈಲ್ವೆ ಇಲಾಖೆಯು ಪರೀಕ್ಷೆಯನ್ನೇ ರದ್ದುಗೊಳಿಸಿದೆ.
ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಈ ರೀತಿಯ ನಿರ್ಧಾರ ಖಂಡನೀಯ. ಈ ವಿಚಾರಕ್ಕೆ ಸಂಬಂಧಿಸಿದಂತೆ ರೈಲ್ವೆ ಸಚಿವ ವಿ. ಸೋಮಣ್ಣ ಅವರು ಮಧ್ಯಪ್ರವೇಶಿಸಿ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಹಿಡಿಯಬೇಕೆಂದು ಆಗ್ರಹಿಸಿದ್ದಾರೆ.
















































