20.3 C
Udupi
Friday, December 26, 2025
spot_img
spot_img
HomeBlog"ಕನ್ನಡ.. ಕನ್ನಡ ಇದಕ್ಕೇನೇ ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು"

“ಕನ್ನಡ.. ಕನ್ನಡ ಇದಕ್ಕೇನೇ ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು”

ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹಾಡುವಂತೆ ಕೇಳಿಕೊಂಡಾಗ ವಿವಾದಾತ್ಮಕ ಹೇಳಿಕೆ ನೀಡಿದ ಸೋನು ನಿಗಮ್

ಬೆಂಗಳೂರು: ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸೋನು ನಿಗಮ್ ಗೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ, ಇದಕ್ಕೇನೇ ಪಹಲ್ಗಾಮ್ ದಾಳಿ ನಡೆದಿದ್ದು ಎಂದು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ.

ಸೋನು ನಿಗಮ್ ಹಾಡುತ್ತಿರುವಾಗ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದನು. ಅದಕ್ಕೆ ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, ನನ್ನ ವೃತ್ತಿಜೀವನದಲ್ಲಿ ನಾನು ಬೇರೆ ಬೇರೆ ಭಾಷೆಗಳಲ್ಲಿ ಹಾಡಿದ್ದೇನೆ. ಆ ಪೈಕಿ ನಾನು ಹಾಡಿದ ಅತ್ಯುತ್ತಮ ಹಾಡುಗಳು ಕನ್ನಡದಲ್ಲಿವೆ. ನಾನು ಕರ್ನಾಟಕಕ್ಕೆ ಬಂದಾಗಲೆಲ್ಲಾ ತುಂಬಾ ಪ್ರೀತಿ, ಗೌರವದಿಂದ ಬರುತ್ತೇನೆ. ನೀವೆಲ್ಲ ನನ್ನನ್ನು ನಿಮ್ಮ ಕುಟುಂಬದವರಂತೆ ನೋಡಿಕೊಂಡಿದ್ದೀರಿ. ಪ್ರತಿ ಬಾರಿ ನಾನು ಯಾವುದೇ ಕಾರ್ಯಕ್ರಮಕ್ಕೆ ಹೋದಾಗಲೂ, ಯಾರಾದರೂ ಕನ್ನಡ ಎಂದು ಕೂಗಿದಾಗ ಅವರಿಗಾಗಿ ಒಂದು ಸಾಲು ಕನ್ನಡ ಹಾಡನ್ನಾದರೂ ಹಾಡಿರುತ್ತೇನೆ. ಆ ಹುಡುಗನ ವಯಸ್ಸಿಗಿಂತ ಮೊದಲಿನಿಂದಲೂ ನಾನು ಕನ್ನಡ ಹಾಡು ಹಾಡುತ್ತಿದ್ದೇನೆ. ಆದರೆ ಕನ್ನಡ, ಕನ್ನಡ ಎಂದು ಕಿರುಚಿಕೊಂಡು ಆ ಹುಡುಗ ಹೇಳಿದ್ದು ನನಗೆ ಇಷ್ಟವಾಗಲಿಲ್ಲ. ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು ಎಂದು ಹೇಳಿದ್ದಾರೆ.

ಕನ್ನಡಪರ ಸಂಘಟನೆಗಳಿಂದ ಸೋನು ನಿಗಮ್ ಅವರ ವಿವಾದಾತ್ಮಕ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ಕನ್ನಡ ಹಾಡುವಂತೆ ಹೇಳಿದ್ದಕ್ಕೂ, ಭಯೋತ್ಪಾದಕರ ದಾಳಿಗೂ ಏನು ಸಂಬಂಧ?. ಸೋನು ನಿಗಮ್‌ರನ್ನು ಕನ್ನಡ ಚಿತ್ರೋದ್ಯಮದಿಂದ ದೂರ ಇಡಿ ಹಾಗೂ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page