
ಜಿಲ್ಲಾ ಪಂಚಾಯತ್ ಉಡುಪಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಛೇರಿ, ರಜತಾದ್ರಿ,ಮಣಿಪಾಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ, ಸೈಂಟ್ ಮೇರಿಸ್ ಪ್ರೌಢಶಾಲೆ, ಕುಂದಾಪುರ ಇಲ್ಲಿ ದಿನಾಂಕ 16-08-2024 ರಂದು ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿಧ್ಯಾರ್ಥಿಯಾದ ಶ್ರೀಫಲ್ ಶೆಟ್ಟಿ 35 ಕೆ.ಜಿ ಒಳಗಿನ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಬೈಲೂರಿನ ಶ್ರೀ ಸಂತೋಷ್ ಶೆಟ್ಟಿ ಹಾಗೂ ಶ್ರೀಮತಿ ಚೇತನ ದಂಪತಿಗಳ ಸುಪುತ್ರನಾಗಿರುತ್ತಾನೆ. ವಿಜೇತ ವಿಧ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂಧಿಸಿದರು.













