
ಸಿನಿಮಾ ಪ್ರಿಯರಿಗೆ ಅಕ್ಟೋಬರ್ 29, 2021 ಕರಾಳ ದಿನವಾಗಿತ್ತು. ಅಗಾಧ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ ತಮ್ಮ ನೆಚ್ಚಿನ ನಟ ಇನ್ನಿಲ್ಲ ಎಂಬ ಸುದ್ದಿ ಎಲ್ಲರಿಗೂ ಬರ ಸಿಡಿಲಿನಂತೆ ಹೊಡೆಯಿತು.
. ಇಂದಿಗೆ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಮೂರು ವರ್ಷವಾಗುತ್ತದೆ.
ಸತತ ಮೂರು ವರ್ಷಗಳಿಂದ ಪುನೀತ್ ರಾಜ್‌ಕುಮಾರ್ ಸಮಾಧಿಗೆ ಅಭಿಮಾನಿಗಳು ಭೇಟಿ ನೀಡುತ್ತಲಿದ್ದು ಅಭಿಮಾನಿಗಳಿಗೆ ಅದು ಸಮಾಧಿಯಲ್ಲ, ದೇವಸ್ಥಾನ ಎಂಬಂತೆ ಪೂಜಿಸುತ್ತಾರೆ.
ಇಂದು ಅಪ್ಪು ಕುಟುಂಬ ಸದಸ್ಯರು ಕಂಠೀರವ ಸ್ಟುಡಿಯೋಗೆ ಆಗಮಿಸಿ ಪುನೀತ್ ರಾಜ್‌ಕುಮಾರ್ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ. ಇಂದು ಪುನೀತ್ ರಾಜಕುಮಾರ್ ಹೆಸರಿನಲ್ಲಿ ಅನ್ನಸಂತರ್ಪಣೆ, ನೇತ್ರದಾನ, ರಕ್ತದಾನ ಶಿಬಿರಗಳನ್ನು ಸಹ ಆಯೋಜನೆ ಮಾಡಲಾಗಿದೆ.









