
ಬೆಳಗಾವಿ: ಇಂದು ಬೆಳಗಾವಿಗೆ ಭೇಟಿ ನೀಡಿ ಹಲ್ಲೆಗೊಳಗಾದ ಕಂಡೆಕ್ಟರ್ ಆರೋಗ್ಯ ವಿಚಾರಿಸಿದ ಸಚಿವ ರಾಮಲಿಂಗಾ ರೆಡ್ಡಿ ಮಾಧ್ಯಮದವರೊಂದಿಗೆ ಮಾತನಾಡಿ ಕರ್ನಾಟಕದ ಬಸ್ ಚಾಲಕರು, ನಿರ್ವಾಹಕರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆ ಹಾಕ್ಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಂಡಕ್ಟರ್ ಆರೋಗ್ಯ ಸ್ಥಿರವಾಗಿದೆ. ಎರಡು ದಿನಗಳಲ್ಲಿ ಮನೆಗೆ ಕಳುಹಿಸುತ್ತಾರೆ. ನಮ್ಮ ಎಂಡಿ ಅವರು ಪ್ರತಿದಿನ ಬಂದು ಯೋಗಕ್ಷೇಮ ವಿಚಾರಿಸುತ್ತಿದ್ದಾರೆ. ಗಲಾಟೆಯಾದ ಬಳಿಕ ಕೇಸ್ ಕೊಟ್ಟಿದ್ದಕ್ಕೆ ಗಾಬರಿಯಾಗಿದ್ದಾರೆ. ಏನೇ ಕೇಸ್ ಮಾಡಲಿ ತನಿಖೆ ಮಾಡುತ್ತಾರೆ ಎಂದು ಹೇಳಿದರು.








