
ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ನೂತನವಾಗಿ ಆರಂಭಿಸಲು ಉದ್ದೇಶಿಸಲಾಗಿದ್ದ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳ ಸಂಖ್ಯೆಯನ್ನು 500 ರಿಂದ 800 ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ವಿಶೇಷವಾಗಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಹೆಚ್ಚಿನ ಸಂಖ್ಯೆಯ ಶಾಲೆಗಳನ್ನು ತೆರೆಯುವ ಉದ್ದೇಶವಿದ್ದು ಅದಕ್ಕಾಗಿ ಸರ್ಕಾರ 3,000 ಕೋಟಿ ರೂ ವೆಚ್ಚ ಮಾಡಲಿದೆ. ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 13,000 ಶಿಕ್ಷಕರನ್ನು ನಿಯೋಜನೆ ಮಾಡಲಾಗಿದ್ದು ಶೀಘ್ರವೇ ಇನ್ನೂ 18,500 ಶಿಕ್ಷಕರ ನೇಮಕ ಮಾಡಲಾಗುವುದು ಎಂದು ಮಾಹಿತಿ ನೀಡಿದರು.