25 C
Udupi
Saturday, May 2, 2026
spot_img
spot_img
HomeBlogಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ ಕೃಷ್ಣ ಇನ್ನಿಲ್ಲ

ಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ ಕೃಷ್ಣ ಇನ್ನಿಲ್ಲ

ಬೆಂಗಳೂರು: ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿ.10) ಬೆಳಗ್ಗೆ 2:30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು
ಕರ್ನಾಟಕದ ಹತ್ತನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಾಹಾರಷ್ಟ್ರದ ರಾಜ್ಯಪಾಲರಾಗಿ ಮತ್ತು ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದ ಎಸ್​​ಎಂ ಕೃಷ್ಣ ಬೆಂಗಳೂರಿನಲ್ಲಿ ನಿಧನರಾದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page