
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP) ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 3,395 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಕನಸು ಹೊಂದಿರುವವರಿಗೆ ಇದು ಉತ್ತಮ ಅವಕಾಶವಾಗಿದೆ.
ಅಭ್ಯರ್ಥಿಗಳು SSLC ಹಾಗೂ PUC ಉತ್ತೀರ್ಣರಾಗಿರಬೇಕು. ಜೊತೆಗೆ ಆಯಾ ಹುದ್ದೆಗೆ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ, ದೈಹಿಕ ಮತ್ತು ವೈದ್ಯಕೀಯ ಮಾನದಂಡಗಳನ್ನು ಪೂರೈಸಿರಬೇಕು. ಕನ್ನಡ ಭಾಷೆಯ ಜ್ಞಾನ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಯೋಮಿತಿಯ ಪ್ರಕಾರ ಸಾಮಾನ್ಯ ವರ್ಗದ ಅಭ್ಯರ್ಥಿಗಳು 1993 ರಿಂದ 2008ರ ನಡುವೆ ಜನಿಸಿರಬೇಕು (ಗರಿಷ್ಠ 33 ವರ್ಷ). ಹಾಗೆಯೇ SC, ST ಹಾಗೂ OBC ವರ್ಗದ ಅಭ್ಯರ್ಥಿಗಳಿಗೆ 1991 ರಿಂದ 2008ರೊಳಗೆ ಜನಿಸಿದವರಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಸಕ್ತ ಅಭ್ಯರ್ಥಿಗಳು ಕಾರ್ಕಳದ ಜೆ.ಸಿ.ಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೋಂದಾವಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 9448625844 /8861514562 ಗೆ ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 28 ಆಗಿದ್ದು ಜೂನ್ 30 ರಿಂದ ತರಗತಿಗಳು ಆರಂಭಗೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಸಂಬಂಧಿತ ನೋಂದಾವಣಿ ಕೇಂದ್ರವನ್ನು ಸಂಪರ್ಕಿಸಬಹುದು ಅಥವಾ ಅಧಿಕೃತ ವೆಬ್‌ಸೈಟ್ KSP Gov. In ಮೂಲಕ ಮಾಹಿತಿ ಪಡೆಯಬಹುದು.


































