
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ ಮೋಹನ್ ಶೆಟ್ಟಿ ಸುದ್ದಿಗಾರರೊಂದಿಗೆ ಮಾತನಾಡಿ ಕಳೆದ ಒಂದೂವರೆ ವರ್ಷದಿಂದ ತನ್ನ ಮಗ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರಲಿಲ್ಲ ಎಂದು ಹೇಳಿದ್ದಾರೆ.
ಬೆಳ್ತಂಗಡಿಯಲ್ಲಿ ಏಪ್ರಿಲ್ 29 ಮತ್ತು 30 ರಂದು ತನ್ನ ತಮ್ಮನ ಮಗಳ ಮದುವೆ ಇತ್ತು, ಅವನು ಅಲ್ಲೇ ಇದ್ದ, ನಂತರ ಮೇ 1ರಂದು ಬಜ್ಪೆಗೆ ಯಾವುದೋ ಕೆಲಸದ ನಿಮಿತ್ತ ಹೋಗಿದ್ದ. ಸುಹಾಸ್ ಹತ್ಯೆಯಾದ ಸುದ್ದಿ ಅವರಿಗೆ ನಿನ್ನೆ ರಾತ್ರಿ 9 ಗಂಟೆಗೆ ಗೊತ್ತಾಗಿದೆ ಎಂದು ತಿಳಿಸಿದ್ದಾರೆ.





