22.3 C
Udupi
Tuesday, February 3, 2026
spot_img
spot_img
HomeBlogಕಳೆದ ವರ್ಷ ಕಾರ್ಯನಿರ್ವಹಿಸಿದ್ದ ಅತಿಥಿ ಉಪನ್ಯಾಸಕರನ್ನೇ ಹಾಲಿ ಸೆಮಿಸ್ಟರ್ ಪೂರ್ಣಗೊಳ್ಳುವವರೆಗೆ ಮುಂದುವರಿಸಲು ಅನುಮತಿ ನೀಡಿದ ಸರ್ಕಾರ

ಕಳೆದ ವರ್ಷ ಕಾರ್ಯನಿರ್ವಹಿಸಿದ್ದ ಅತಿಥಿ ಉಪನ್ಯಾಸಕರನ್ನೇ ಹಾಲಿ ಸೆಮಿಸ್ಟರ್ ಪೂರ್ಣಗೊಳ್ಳುವವರೆಗೆ ಮುಂದುವರಿಸಲು ಅನುಮತಿ ನೀಡಿದ ಸರ್ಕಾರ

ಬೆಂಗಳೂರು: ಸರ್ಕಾರವು ಅತಿಥಿ ಉಪನ್ಯಾಸಕರ ನೇಮಕಕ್ಕೆ ಎದುರಾಗಿರುವ ಕಾನೂನು ಕಗ್ಗಂಟು ಬಗೆಹರಿಯುವವರೆಗೆ ಕಳೆದ ವರ್ಷ ಕಾರ್ಯನಿರ್ವಹಿಸಿದ್ದ ಅತಿಥಿ ಉಪನ್ಯಾಸಕರನ್ನೇ 2025-26ನೇ ಸಾಲಿನ ಹಾಲಿ ಸೆಮಿಸ್ಟರ್ ಪೂರ್ಣಗೊಳ್ಳುವವರೆಗೆ ಮುಂದುವರಿಸುವಂತೆ ತಿಳಿಸಿದೆ.

ಹೆಚ್ಚುವರಿ ಅಡ್ವೋಕೇಟ್ ಜನರಲ್ ಅವರು ನೀಡಿರುವ ಕಾನೂನು ಅಭಿಪ್ರಾಯದಂತೆ ಸೆ.9ರಂದು ನೀಡಿರುವ ಮಧ್ಯಂತರ ಆದೇಶಕ್ಕೆ ಒಳಪಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2024-25ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಅತಿಥಿ ಉಪನ್ಯಾಸಕರನ್ನೇ ತಾತ್ಕಾಲಿಕವಾಗಿ ಈ ಸಾಲಿನ ಹಾಲಿ ಸೆಮಿಸ್ಟರ್‌ ಪೂರ್ಣಗೊಳ್ಳುವವರೆಗೆ ಮುಂದುವರೆಸಲು ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸಂಜಯ್ ಬಿ.ಎಸ್. ಅವರು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯು ಕಳೆದ ವರ್ಷ ಸುಮಾರು 10,500 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡಿದ್ದು ಅವರ ಕರ್ತವ್ಯದ ಅವಧಿಯು ಇದೇ ಆ.2ಕ್ಕೆ ಕೊನೆಯಾಗಿತ್ತು. ಆಗಸ್ಟ್‌ನಲ್ಲಿ ಕಾಲೇಜು ಆರಂಭವಾದ ಬಳಿಕ ಎರಡು ತಿಂಗಳಿನಿಂದ ಉಪನ್ಯಾಸಕರಿಲ್ಲದೆ ತರಗತಿಗಳು ನಡೆಯದಿರುವ ಕಾರಣ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಿದ್ದು ಇದೀಗ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page