
ಬೆಂಗಳೂರು: ನೇಪಾಳ ಸರ್ಕಾರದ ಭ್ರಷ್ಟಾಚಾರ ಮತ್ತು ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸಿರುವ ಕ್ರಮ ವಿರೋಧಿಸಿ ರಾಜಧಾನಿ ಕಾಠ್ಮಂಡುವಿನಲ್ಲಿ ಭಾರೀ ಪ್ರತಿಭಟನೆ ಭುಗಿಲೆದ್ದಿದ್ದು ಇದರ ನಡುವೆ ಕಾಠ್ಮಂಡುವಿನಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಅಗತ್ಯ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.
ಕಾಠ್ಮಂಡು ವಿಮಾನ ನಿಲ್ದಾಣದಲ್ಲಿ 39 ಮಂದಿ ಕನ್ನಡಿಗರು ರಾಜ್ಯಕ್ಕೆ ಹಿಂತಿರುಗಲಾಗದೆ ಸಿಲುಕಿಕೊಂಡಿದ್ದು ಅವರೆಲ್ಲರನ್ನೂ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಸಂಬಂಧಪಟ್ಟವರ ಜತೆ ಚರ್ಚಿಸಿ ಅಗತ್ಯ ಕ್ರಮ ವಹಿಸುವಂತೆ ಮುಖ್ಯಮಂತ್ರಿ ತಿಳಿಸಿದ್ದಾರೆ.
ಇದರ ಬೆನ್ನಲ್ಲೇ ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರಾಜತಾಂತ್ರಿಕ ಪ್ರತಿನಿಧಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.



















