
ಜುಲೈ 15ರಂದು ಪರಮ್ವಾ ಸ್ಟುಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದು ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಿತ್ ಶೆಟ್ಟಿ ಅವರು ಇಂದು ಯಶವಂತಪುರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’ ಎಂಬ ಹಾಡು ಮತ್ತು ‘ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ’ ಸಾಂಗ್ ಅನುಮತಿ ಇಲ್ಲದೆ ಬಳಸಿದಕ್ಕೆ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.











