
ಉಡುಪಿ: ಶುಕ್ರವಾರ ಮುಂಜಾನೆ 3 ಗಂಟೆ ವೇಳೆಗೆ ಜಿಲ್ಲೆಯ ಅಂಬಲಪಾಡಿ ಜಂಕ್ಷನ್ ನಲ್ಲಿ ರಾಷ್ಟ್ರೀಯ ಹೆದ್ದಾರಿಯ ಮೇಲೆ ಕಾಮಗಾರಿ ಗೆಂದು ಅಗೆದಿರುವ ಬೃಹತ್ ಹೊಂಡಕ್ಕೆ ಕಾರೊಂದು ಮಗುಚಿ ಬಿದ್ದ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ನಲ್ಲಿ ಮೇಲ್ಸೇತುವೆಯ ಪಿಲ್ಲರ್ ನಿರ್ಮಿಸಲು ಬೃಹತ್ ಹೊಂಡ ತೆಗೆಯಲಾಗಿದ್ದು ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಐದು ಪ್ರಯಾಣಿಕರಿದ್ದ ಕಾರೊಂದು ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಮಗುಚಿ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಜೀವಪಾಯದಿಂದ ಪಾರಾಗಿದ್ದಾರೆ.




