
ಕಾರ್ಕಳ: ಕಾರ್ಕಳ ತಾಲೂಕಿನ ಬೋಳದಲ್ಲಿ ಹತ್ತನೇ ತರಗತಿಯ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಗಂಭೀರ ಪ್ರಕರಣ ನಡೆದಿದ್ದು, ಆರೋಪಿಯನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
ಫೆ.25ರಂದು ಸಂಜೆ ಬೋಳ ನಿವಾಸಿ ಅಮರನಾಥ್ ಪೂಜಾರಿ (31) ಎಂಬಾತ ಬಾಲಕಿಯು ಶಾಲೆ ಮುಗಿಸಿ ತೆರಳುತ್ತಿದ್ದ ವೇಳೆ, ಮನೆಗೆ ಬಿಡುವುದಾಗಿ ನಂಬಿಸಿ ತನ್ನ ರಿಕ್ಷಾದಲ್ಲಿ ಕರೆದುಕೊಂಡು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಘಟನೆಯ ಬೆನ್ನಲ್ಲೇ ಕಾರ್ಯ ಪ್ರವೃತ್ತರಾದ ಕಾರ್ಕಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಫೆ.26ರಂದು ಬಂಧಿಸಿ ಪೋಕ್ಸೋ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ ಕುರಿತಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






