28.9 C
Udupi
Wednesday, June 17, 2026
spot_img
spot_img
HomeBlogಕಾರ್ಕಳದಲ್ಲಿ ದೇವರ ಬೆಳ್ಳಿಯ ಕಣ್ಣು ಕಳವು: ಎಫ್‌ಐಆರ್ ದಾಖಲಾದ 6 ಗಂಟೆಯಲ್ಲೇ ಆರೋಪಿಯ ಬಂಧನ

ಕಾರ್ಕಳದಲ್ಲಿ ದೇವರ ಬೆಳ್ಳಿಯ ಕಣ್ಣು ಕಳವು: ಎಫ್‌ಐಆರ್ ದಾಖಲಾದ 6 ಗಂಟೆಯಲ್ಲೇ ಆರೋಪಿಯ ಬಂಧನ

ಕಾರ್ಕಳ: ಕರಿಯಕಲ್ಲು ಶ್ರೀ ಶನೀಶ್ವರ ದೇವಸ್ಥಾನದಲ್ಲಿ ದೇವರಿಗೆ ಅಳವಡಿಸಲಾಗಿದ್ದ ಬೆಳ್ಳಿಯ ಕಣ್ಣುಗಳನ್ನು ಕಳವುಗೈದ ಆರೋಪಿಯನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬಿಹಾರ ಮೂಲದ ಎಂ.ಡಿ. ಸರ್ಫಜ್ ಎಂದು ಗುರುತಿಸಲಾಗಿದೆ.

ಜೂನ್ 16ರಂದು ಬೆಳಿಗ್ಗೆ ಸುಮಾರು 7 ಗಂಟೆಗೆ ದೇವಸ್ಥಾನದ ಸಮಿತಿಯ ಸದಸ್ಯರೊಬ್ಬರು ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ದೇವರ ಮೂರ್ತಿಗೆ ಅಳವಡಿಸಲಾಗಿದ್ದ ಬೆಳ್ಳಿಯ ಕಣ್ಣುಗಳು ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಬಳಿಕ ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಕ್ಷಣ ತನಿಖೆ ಆರಂಭಿಸಿದ್ದು, ಎಫ್‌ಐಆರ್ ದಾಖಲಾದ ಕೇವಲ ಆರು ಗಂಟೆಗಳಲ್ಲೇ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಪೊಲೀಸರ ತ್ವರಿತ ಕಾರ್ಯಾಚರಣೆಗೆ ಸಾರ್ವಜನಿಕರು ಹಾಗೂ ದೇವಸ್ಥಾನ ಸಮಿತಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page