
ಕಾರ್ಕಳ :ಉಡುಪಿಯ ಆದರ್ಶ ಆಸ್ಪತ್ರೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್ 6 ರಂದು ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ನಡೆಯಲಿರುವ ಜಿಲ್ಲಾ ಶಿಕ್ಷಕರ ದಿನಾಚರಣೆಯಲ್ಲಿ ಕಾರ್ಕಳ ಕುಕ್ಕುಂದೂರು ಮಹಾತ್ಮಗಾಂಧಿ ಪ್ರೌಢಶಾಲೆಯ ಆಂಗ್ಲ ಭಾಷಾ ಶಿಕ್ಷಕರಾದ ಮಾದಪ್ಪ ಎನ್. ಇವರು ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ಪಡೆಯಲಿದ್ದಾರೆ .
ಕಳೆದ 17 ವರ್ಷಗಳಿಂದ ಈ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ಪ್ರತಿ ವರ್ಷವೂ ಉತ್ತಮ ಫಲಿತಾಂಶ ಪಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ. ಶಾಲೆಯ ಮತದಾರರ ಸಾಕ್ಷಾರತಾ ಕ್ಲಬ್ ನೋಡಲ್ ಶಿಕ್ಷಕರಾಗಿ ವಿದ್ಯಾರ್ಥಿಗಳಲ್ಲಿ ಮತದಾನದ ಅರಿವನ್ನು ಮೂಡಿಸುತ್ತ ವಿವಿಧ ಚಟುವಟಿಕೆಗಳನ್ನು ಆಯೋಜಿಸುತ್ತಿದ್ದಾರೆ. ಕ್ರಿಯಾಶೀಲ ಶಿಕ್ಷಕರಾಗಿರುವ ಇವರು ಶಾಲೆಯ ಶೈಕ್ಷಣಿಕ ಪ್ರಗತಿಗೆ ನೆರವಾಗುತ್ತಿದ್ದಾರೆ.













