ಪ್ರತಿಮ ರಾಣೆ, ಸುರೇಶ್ ಹಾಗೂ ನಕ್ರೆಯ ಅಣ್ಣಪ್ಪ ಆಯ್ಕೆ

ಕಾರ್ಕಳ: ಕಾಬೆಟ್ಟುವಿನಲ್ಲಿರುವ ತಾಲೂಕು ಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಭವನದ ನಿರ್ವಹಣಾ ಸಮಿತಿಗೆ ಮೂವರು ನಾಮ ನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲಾಗಿದೆ. ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷೆ ಪ್ರತಿಮಾ ರಾಣೆ, ಅತ್ತೂರು ಚೇತನ ಹಳ್ಳಿಯ ಸುರೇಶ್ ಹಾಗೂ ನಕ್ರೆಯ ಅಣ್ಣಪ್ಪ ಅವರಿಗೆ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.
ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಸಮಿತಿಯನ್ನು ಪುನರ್ರಚಿಸಲಾಗಿದ್ದು, ಕಾರ್ಕಳ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಕಳ ತಾಲೂಕು ಪಿಡಬ್ಲ್ಯೂಡಿಯ ಕಾರ್ಯಕಾರಿ ಅಭಿಯಂತರು, ಜಿಲ್ಲಾ ಪಂಚಾಯತ್ ಇಂಜಿನಿಯರ್ ವಿಭಾಗದ ಸಹಾಯಕ ಕಾರ್ಯಕಾರಿ ಅಭಿಯಂತರರು, ಕಾರ್ಕಳ ಪುರಸಭೆ ಮುಖ್ಯಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸದಸ್ಯರಾಗಿ ಈ ಮೂವರನ್ನು ನಾಮ ನಿರ್ದೇಶಿತ ಸದಸ್ಯರಾಗಿ ಹೊಂದಿರುವ ಡಾ. ಬಿ ಆರ್ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ರಚಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ

































