ಪರವಾನಿಗೆ ಇಲ್ಲದೆ ಸ್ಫೋಟಕ ಬಳಸಿ ಕಲ್ಲು ಬಂಡೆ ಒಡೆದ ಆರೋಪ: ಪ್ರಕರಣ ದಾಖಲು

ಕಾರ್ಕಳ: ತಾಲ್ಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಪ್ರದೇಶದಲ್ಲಿ ರವಿಚಂದ್ರ ಹಾಗೂ ಪವನ್ ಎಂಬವರು ಯಾವುದೇ ಪರವಾನಿಗೆ ಇಲ್ಲದೆ ಸ್ಫೋಟಕಗಳನ್ನು ಬಳಸಿ ಕಲ್ಲುಬಂಡೆ ಒಡೆಯುತ್ತಿದ್ದ ಆರೋಪದ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯರ ಮಾಹಿತಿ ಮೇರೆಗೆ ಉಪ ನಿರೀಕ್ಷಕ ಮರಳಿಧರ ನಾಯ್ಕ್ ಕೆ.ಜಿ. ಅವರು ಸ್ಥಳ ಪರಿಶೀಲನೆ ನಡೆಸಿದ್ದು, ಮೇಲಾಧಿಕಾರಿಗಳ ಸೂಚನೆಯಂತೆ ಉಡುಪಿ ಜಿಲ್ಲಾ ಸೊಕೋ ತಂಡವೂ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಪ್ರಕರಣ ದಾಖಲಿಸಲಾಗಿದೆ.








