30.9 C
Udupi
Wednesday, February 4, 2026
spot_img
spot_img
HomeBlogಕಾರ್ಕಳ : ಅಕ್ರಮ ಗಣಿಗಾರಿಕೆ ವಿರುದ್ಧ ತಹಶೀಲ್ದಾರ್ ಗೆ ಮನವಿ

ಕಾರ್ಕಳ : ಅಕ್ರಮ ಗಣಿಗಾರಿಕೆ ವಿರುದ್ಧ ತಹಶೀಲ್ದಾರ್ ಗೆ ಮನವಿ

ಕಾರ್ಕಳ: ರಾಜ್ಯದ ಖನಿಜ ಸಂಪತ್ತು ಹಾಗೂ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಅಕ್ರಮ ಚಟುವಟಿಕೆಗಳು ದಿನೇದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ
ಅಕ್ರಮ ಗಣಿಗಾರಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ ಉಂಟಾಗುತ್ತಿದ್ದು, ಈ ಸಂಬಂಧ ಅಧಿಕಾರಿಗಳ ಕರ್ತವ್ಯ ಲೋಪದ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕೆಆರ್‌ಎಸ್ ಪಕ್ಷದಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಭಯಾನಕ ಸ್ಫೋಟಕಗಳನ್ನು ಬಳಸಿ ಗಣಿಗಾರಿಕೆ ನಡೆಸಲಾಗುತ್ತಿದ್ದು, ಖನಿಜ ಸಂಪತ್ತನ್ನು ಅಕ್ರಮವಾಗಿ ಕೊಳ್ಳೆ ಹೊಡೆಯಲಾಗುತ್ತಿದೆ. ಡೀಮ್ಡ್ ಹಾಗೂ ಮೀಸಲು ಅರಣ್ಯ ಪ್ರದೇಶಗಳಲ್ಲಿ ಕೂಡ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಈ ಎಲ್ಲ ಪ್ರಕರಣಗಳ ಕುರಿತು ಕೂಲಂಕುಶ ತನಿಖೆ ನಡೆಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ರಾಜ್ಯ ಖಜಾಂಚಿ ವಿಜಯ ರಾಘವ ಮರಾಟೆ, ಜಿಲ್ಲಾ ಕಾರ್ಯದರ್ಶಿ ಆರತಿ ಅಶೋಕ್, ಕಾರ್ಕಳ ತಾಲೂಕು ಅಧ್ಯಕ್ಷ ಉಮೇಶ್ ಕಲ್ಲೊಟ್ಟೆ, ಉಪಾಧ್ಯಕ್ಷ ನಾಗೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ಶೋಭಾ ಶಂಕರಪ್ಪ, ಕಾರ್ಯದರ್ಶಿ ಸಂತೋಷ್ ಕುಲಾಲ್, ಸದಾನಂದ ಹೆಗಡೆ, ಸಂಘಟನಾ ಕಾರ್ಯದರ್ಶಿ ಸುಜಾತ ಎಸ್. ಪೂಜಾರಿ, ಯಾದವ್ ಆಚಾರ್ಯ, ಅಣ್ಣಿ ಗೌಡ ಸೇರಿದಂತೆ ಸದಸ್ಯರಾದ ಸುರೇಶ್ ಆಚಾರ್ಯ ಅತ್ತೂರು ಹಾಗೂ ಚೇತನಹಳ್ಳಿ ಶಾಕಿರ್ ಮೊಹಮ್ಮದ್ ಹನೀಫ್ ಪಾಲ್ಗೊಂಡಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page