
ಕಾರ್ಕಳ : ಜು. 27 ರ ಮುಂಜಾನೆ 3-35 ಸುಮಾರಿಗೆ ಕುಕ್ಕುಂದೂರು ಗ್ರಾಮ ಪಂಚಾಯತ್ ವಾಪ್ತಿಯ
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ರಸ್ತೆಯ ಹತ್ತಿರ ಹೊಸದಾಗಿ ನಿರ್ಮಿಸಿರುವ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ ರೂ. 2 ಲಕ್ಷ ನಷ್ಟ ಸಂಭವಿಸಿದ ಘಟನೆ ನಡೆದಿದೆ.
ಕಾರ್ಕಳ ಅಗ್ನಿಶಾಮಕ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಲು ಯಶಸ್ವಿಯಾಗಿದ್ದು, ಹೆಚ್ಚಿನ ಪ್ರಮಾಣದ ಅನಾಹುತ ತಪ್ಪಿಸಿದೆ. ಅಗ್ನಿಶಾಮಕ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಅಚ್ಚುತ ಕರ್ಕೇರ, ಜಯ ಮೂಲ್ಯ ನಿತ್ಯಾನಂದ, ರವಿಚಂದ್ರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.











