
ಕಾರ್ಕಳ: ಕಾರ್ಕಳ ತಾಲೂಕಿನ ಆಟೋ ಚಾಲಕ–ಮಾಲಕರ ಸಂಘದ ಅಧ್ಯಕ್ಷರಾಗಿ ನ್ಯಾಯವಾದಿ ಬೈಲೂರು ಸದಾನಂದ ಸಾಲಿಯಾನ್ ಆಯ್ಕೆಯಾಗಿದ್ದಾರೆ.
ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸದಾನಂದ ಸಾಲಿಯಾನ್, ಕಾರ್ಕಳ ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ಬೈಲೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಕಾರ್ಯದರ್ಶಿಯಾಗಿಯೂ, ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿಯಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಕರಕರಿ ಫ್ರೆಂಡ್ಸ್ ಸಂಘಟನೆಯಲ್ಲಿಯೂ ಅವರು ಸಕ್ರಿಯ ಸದಸ್ಯರಾಗಿದ್ದಾರೆ.
ಬೈಲೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿದ ಅವರು, ವೈಕುಂಠ ಬಾಳಿಗ ಲಾ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದಾರೆ. 2005ರಿಂದ ಕಾರ್ಕಳದಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ.






