
ಇಂದು (ಎ30) ಮಂಗಳವಾರದಂದು ಲೈನ್ ಶಿಫ್ಟಿಂಗ್/ನಿರ್ವಹಣೆ ಕಾರ್ಯವನ್ನು ಮೆಸ್ಕಾಂ ಇಲಾಖೆ ಹಮ್ಮಿಕೊಂಡಿರುವುದರಿಂದ 220/110/11ಕೆವಿ ಕೇಮಾರ್ ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಬಜಗೋಳಿ, ಹೊಸ್ಮಾರು, ಮಿಯ್ಯಾರ್, ಹಾಗೂ ಕಾರ್ಕಳ ಎಕ್ಸ್‌ಪ್ರೆಸ್ ಫೀಡರಿನಲ್ಲಿ ಬೆಳಿಗ್ಗೆ 09:00 ಗಂಟೆಯಿಂದ ಸಂಜೆ 5:00ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ಮಿಯ್ಯಾರು, ರೆಂಜಾಳ, ಬೊರ್ಕಟ್ಟೆ, ರಾಮೇರಗುತ್ತು, ಕಾಜರಬೈಲು, ಅಡ್ಕರಪಲ್ಕೆ, ಕುರ್ಕಲ್‌ಪಲ್ಕೆ, ಹಿನಾಪಾಡಿ, ನೆಲ್ಲಿಗುಡ್ಡೆ, ಕಳತ್ರಪಾದೆ, ಮಂಜಡ್ಕ, ಜೋಡುಕಟ್ಟೆ, ಕಾಳಿಕಾಂಬ, ಫುಕ್ಕೇರಿ, ಹಾಗೂ ಇತರ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.