
ಕಾರ್ಕಳ ಕುಂಟಲ್ಪಾಡಿಯಲ್ಲಿ, ರಸ್ತೆ ಬದಿ ನವೀನ್ ಕುಮಾರ್ (50) ಎಂಬವರ ಹತ್ಯೆಯಾಗಿದ್ದು, ಇವರು ಕಾರ್ಕಳದ ಎಸ್ ಜೆ ಆರ್ ಕೆ ಬಿಲ್ಡಿಂಗ್ ನಲ್ಲಿ ವಾಸವಾಗಿದ್ದರು ಎನ್ನಲಾಗಿದೆ.
ಬೆಳಗಿನ ಜಾವ 3 ಗಂಟೆಗೆ ಘಟನೆ ಬೆಳಕಿಗೆ ಬಂದಿದ್ದು, ಘಟನಾ ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಹತ್ಯೆಯಾದ ವ್ಯಕ್ತಿ ಬಡ್ಡಿ ವ್ಯವಹಾರ ನಡೆಸುತ್ತಿದ್ದು, ಇ ಹತ್ಯೆಗೆ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ.