
ಕಾರ್ಕಳ: ಬಂಟರ ಸೇವಾ ಸಂಘ (ರಿ.) ಕುಕ್ಕುಂದೂರು ವತಿಯಿಂದ ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ “ಕೆಸರ್ ಡೊಂಜಿ ಬಂಟಕೂಟ” ಕಾರ್ಯಕ್ರಮವು ಜುಲೈ 12ರಂದು ಭಾನುವಾರ ಬೆಳಿಗ್ಗೆ 8.30ರಿಂದ ಕುಕ್ಕುಂದೂರು ಕೊಡಿಯಾಲು ಮನೆಯ ಕಂಬಳ ಮೈದಾನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ವಾಲಿಬಾಲ್, ಥ್ರೋಬಾಲ್ ಹಾಗೂ ಹಗ್ಗಜಗ್ಗಾಟ ಸೇರಿದಂತೆ ವಿವಿಧ ಕ್ರೀಡಾಸ್ಪರ್ಧೆಗಳು ನಡೆಯಲಿದ್ದು, ವಿಜೇತರಿಗೆ ಬಹುಮಾನ ದೊರೆಯಲಿದೆ.
ಬೆಳಿಗ್ಗೆ 9 ಗಂಟೆಗೆ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸೇವಾ ಸಂಘ ಕುಕ್ಕುಂದೂರಿನ ಅಧ್ಯಕ್ಷೆ ಜಯಂತಿ ಸುಧಾಕರ್ ಶೆಟ್ಟಿ, ಉದಯಕುಮಾರ್ ಶೆಟ್ಟಿ ಮುನಿಯಾಲು ಕಾರ್ಯಕ್ರಮ ಉದ್ಘಾಟಿಸಲಿದ್ದು ,ಮುಖ್ಯ ಅತಿಥಿಗಳಾಗಿ ವಿಜಯ್ ಶೆಟ್ಟಿ, ಪ್ರದೀಪ್ ಕುಮಾರ್ ಶೆಟ್ಟಿ, ಸಿಎ ನಿತೇಶ್ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಕೆ. ರವಿ ಶೆಟ್ಟಿ, ನಿವೃತ್ತ ಶಿಕ್ಷಕ ಎಸ್. ತುಕಾರಾಮ್ ಶೆಟ್ಟಿ, ಭರತ್ ಎನ್ ಶೆಟ್ಟಿ, ಯುವರಾಜ್ ಶೆಟ್ಟಿ, ಸುಧಾಕರ್ ಶೆಟ್ಟಿ ಮತ್ತಿತರ ಉಪಸ್ಥಿತಿ ಇರಲಿದೆ.
ಸಂಜೆ 5:30 ರಿಂದ ಸಮಾರೋಪ ಸಮಾರಂಭ ನಡೆಯಲಿದ್ದು ಜ್ಯೋತಿ ಸುನಿಲ್ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅತಿಥಿಗಳಾಗಿ ಸುಮಿತ್ ಶೆಟ್ಟಿ ಕೌಡೂರು, ಸುಧಾಕರ್ ಶೆಟ್ಟಿ ಕುಕ್ಕುಂದೂರು, ಮಧುರಾಜ್ ಶೆಟ್ಟಿ, ಕಿಶೋರ್ ಶೆಟ್ಟಿ ,ರಾಜೇಶ್ ಶೆಟ್ಟಿ, ಶಶಿಕಾಂತ್ ಶೆಟ್ಟಿ ಪಡುಮನೆ, ದಯಾನಂದ್ ಶೆಟ್ಟಿ, ಸತೀಶ್ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ರವಿಕುಮಾರ್ ಶೆಟ್ಟಿ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.












































