
ಕಾರ್ಕಳ: ಎರ್ಲಾಪಾಡಿ ನಿವಾಸಿ ಸುಹೇಶ್ ಕುಮಾರ್ (22) ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಯುವಕ.
ಸುಹೇಶ್ ಕುಮಾರ್ ಕೆಲವು ದಿನಗಳಿಂದ ಕೆಮ್ಮಿನಿಂದ ಬಳಲುತ್ತಿದ್ದು ಔಷದ ತೆಗೆದುಕೊಳ್ಳುತ್ತಿದ್ದರು. ಗುರುವಾರ ಮನೆಯಲ್ಲಿ ಕುಳಿತಿದ್ದ ಸಮಯ ಕೆಳಗೆ ಬಿದ್ದು ಅಸ್ವಸ್ಥಗೊಂಡಿದ್ದು, ಇವರನ್ನು ಚಿಕಿತ್ಸೆಗಾಗಿ ಕಾರ್ಕಳದ ಗಾಜ್ರಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಸಂದರ್ಭದಲ್ಲಿ ವೈದ್ಯರು ಯುವಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಪ್ರಕರಣ ಕಾರ್ಕಳ ನಗರ ಠಾಣೆಯಲ್ಲಿ ದಾಖಲಾಗಿದೆ.



