
ಕಾರ್ಕಳ : ಕಾರ್ಕಳ-ಪಡುಬಿದ್ರೆ ಹೆದ್ದಾರಿಯಲ್ಲಿ ರಿಕ್ಷಾ ಮತ್ತು ಮಂಗಳೂರಿನಿಂದ ಕಾರ್ಕಳಕ್ಕೆ ಬರುತ್ತಿದ್ದ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜೂ. 12ರ ಮುಂಜಾನೆ ಅಡ್ವೆ ಕಣಜಾರ್ ಕಟ್ಟೆ ಎಂಬಲ್ಲಿ ನಡೆದಿದೆ.ರಿಕ್ಷಾದಲ್ಲಿದ್ದ ಓರ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುತ್ತಾರೆ. ತಕ್ಷಣವೇ ಸ್ಥಳೀಯರು ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎರಡೂ ವಾಹನದ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.



















