
ಸರ್ಕಾರದ ಸುತ್ತೋಲೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಜೂನ್ 2024 ರ ಮೊದಲ ವಾರದಿಂದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಂಟಿಯಾಗಿ ತಾಲೂಕು ಮಟ್ಟದಲ್ಲಿ “ಜನಸ್ಪಂದನಾ” ಕಾರ್ಯಕ್ರಮವನ್ನು ನಡೆಸುವಂತೆ ನಿರ್ದೇಶನವಿದ್ದು,ಜುಲೈ 12 ರಂದು ಪೂರ್ವಾಹ್ನ 10.00 ಗಂಟೆಗೆ ಕಾರ್ಕಳ ತಾಲೂಕು ಮಟ್ಟದ “ಜನಸ್ಪಂದನಾ” ಕಾರ್ಯಕ್ರಮವನ್ನು “ಶ್ರೀ ನಾರಾಯಣಗುರು ಸಭಾಭವನ, ಪೆರ್ವಾಜೆ,” ಕಾರ್ಕಳ ಇಲ್ಲಿ ನಡೆಸಲಾಗುತ್ತಿದೆ,ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದ್ದು ಹಾಗೂ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಗೌರವಾನ್ವಿತ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕಾರ್ಕಳ ತಹಶೀಲ್ದಾರ್ ನರಸಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ