
ಕಾರ್ಕಳ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಕಾರ್ಕಳ ತಾಲೂಕು ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಬೆಟ್ಟು ಇವರ ಸಹಯೋಗದಲ್ಲಿ ಆಯೋಜಿಸಿದ್ದ 14ರ ವಯೋಮಿತಿಯೊಳಗಿನ ಕಾರ್ಕಳ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆ ಗಣಿತ ನಗರ ಇಲ್ಲಿಯ 8ನೇ ತರಗತಿಯ ವಿದ್ಯಾರ್ಥಿನಿಯರಾದ ಅದಿತಿ 80ಮೀಟರ್ ಹರ್ಡಲ್ಸ್ ಓಟದಲ್ಲಿ ದ್ವಿತೀಯ ಸ್ಥಾನ ಮತ್ತು ಅನುಷಾ ಶಾಟ್ ಪುಟ್ನಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
8ನೇ ತರಗತಿಯ ವಿದ್ಯಾರ್ಥಿಗಳಾದ ಸಮೃದ್ ಭಟ್ ಡಿಸ್ಕಸ್ ತ್ರೋನಲ್ಲಿ ತೃತೀಯ ಸ್ಥಾನ, ಅದಿತಿ, ಕೃತಿಕ , ಪ್ರತಿಕ್ಷ ಹಾಗೂ 7ನೇ ತರಗತಿಯ ವಿದ್ಯಾರ್ಥಿನಿ ಕಶ್ವಿ 4×100 ಮೀಟರ್ ರಿಲೇ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.






















































